×
Ad

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Update: 2018-05-26 22:02 IST

ಮಣಿಪಾಲ, ಮೇ 26: ಹೊಲಿಗೆ ತರಬೇತಿ ಪಡೆಯಲು ಇಚ್ಚಿಸುವ ಆಸಕ್ತ ಮಹಿಳೆಯರಿಗೆ ಜೂನ್ 11ರಿಂದ 30 ದಿನಗಳ ಕಾಲ ಉಚಿತ ಹೊಲಿಗೆ ತರಬೇತಿಯನ್ನು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದಲ್ಲಿ ಹಮ್ಮಿಕೊಂಡಿದೆ.

ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು ಹಾಗೂ ಶಾಲಾ ಕಾಲೇಜು ಕಲಿಯುತ್ತಿರುವ/ವಿದ್ಯಾಭ್ಯಾಸ ಮುಗಿಸಿರುವ ಮಹಿಳಾ ವಿದ್ಯಾರ್ಥಿಗಳು ಈ ತರಬೇತಿಯ ಸುಪಯೋಗ ಪಡೆದುಕೊಳ್ಳಬಹುದು.

ತರಬೇತಿ ಅವಧಿಯಲ್ಲಿ ಅ್ಯರ್ಥಿಗಳಿಗೆ ಉಚಿತ ಊಟ, ಉಪಹಾರ ಹಾಗೂ ದೂರದವರಿಗೆ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಅಸಕ್ತ ಅ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಜೂ.2ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ‘ಅನಂತ’, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ-576102 (ದೂರವಾಣಿ:0820-2570263) ಇಲ್ಲಿಗೆ ಕಳುಹಿಸಿಕೊಡಬೇಕು ಎಂು ಬಿವಿಟಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News