×
Ad

ಉಡುಪಿ ನಗರಸಭೆ ಎಲ್ಲ ವಾರ್ಡ್ ಗೆಲ್ಲುವ ಗುರಿ: ರಘುಪತಿ ಭಟ್

Update: 2018-05-26 22:09 IST

ಉಡುಪಿ, ಮೇ 26: ಮುಂದೆ ಬರಲಿರುವ ಉಡುಪಿ ನಗರಸಭೆ ಚುನಾ ವಣೆಯಲ್ಲಿ ಎಲ್ಲ 35ವಾರ್ಡ್‌ಗಳನ್ನು ಮತ್ತು 2019ರ ಲೋಕಸಭಾ ಚುನಾವಣೆ ಯಲ್ಲಿ ಉಡುಪಿ ಕ್ಷೇತ್ರದಲ್ಲ್ಲಿ 40ಸಾವಿರ ಮತಗಳ ಮುನ್ನಡೆ ಸಾಧಿಸುವ ಗುರಿ ಯೊಂದಿಗೆ ಇಂದಿನಿಂದಲೇ ಕಾರ್ಯನಿರ್ವಹಿಸಲಾಗುವುದು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ನಗರ ಬಿಜೆಪಿ ವತಿಯಿಂದ ನಗರದ ಚಿತ್ತರಂಜನ್ ಸರ್ಕಲ್‌ನಲ್ಲಿ ಶನಿವಾರ ಆಯೋಜಿಸಲಾದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್‌ಗಳಲ್ಲಿಯೂ ಕಾರ್ಯಕರ್ತ ರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಾರ್ಯ ಕರ್ತರ ಸ್ಥಳೀಯ ಸಮಸ್ಯೆಗಳನ್ನು ಪಟ್ಟಿ ಮಾಡಿ ನೀಡಿದರೆ ಅವುಗಳನ್ನು ಪರಿಹರಿ ಸುವ ಪ್ರಯತ್ನ ಮಾಡಲಾಗುವುದು ಎಂದರು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಅಧಿಕಾರದಲ್ಲಿ ಇದ್ದರೆ ಮಾತ್ರ ಕೆಲಸ ಮಾಡುವುದಲ್ಲ, ಪ್ರಬಲ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಆಗುತ್ತದೆ. ಮರಳಿನ ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮಾಜಿ ಶಾಸಕರು ಹೇಳಿದ್ದಾರೆ. ಇವರು ಎರಡು ವರ್ಷದಲ್ಲಿ ಮಾಡದ್ದನ್ನು ನಾವು ಒಂದು ತಿಂಗಳಲ್ಲಿ ಹೇಗೆ ಸರಿ ಮಾಡುವುದು ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮುಖಂಡರಾದ ಯಶ್ಪಾಲ್ ಸುವರ್ಣ, ಶ್ಯಾಮಲಾ ಕುಂದರ್, ದಿನಕರ ಹೆರ್ಗ, ದಾವೂದ್, ರಾಘವೇಂದ್ರ ಕಿಣಿ ಮೊದಲಾದವರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪರ್ಕಳದಿಂದ ನಗರ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News