​ಮುಖ್ಯಮಂತ್ರಿ ಕುಮಾರಸ್ವಾಮಿ- ರಾಹುಲ್ ಗಾಂಧಿ ಭೇಟಿ ರದ್ದು ?

Update: 2018-05-27 05:03 GMT

ಹೊಸದಿಲ್ಲಿ, ಮೇ 27: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರವಿವಾರ ಮಧ್ಯಾಹ್ನ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಕಾರ್ಯಕ್ರಮ ರದ್ದಾಗಿದೆ.
ಈ ಮೊದಲು ಹೆಚ್ ಡಿ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ಅವರನ್ನು ಮಧ್ಯಾಹ್ನ ಭೇಟಿಯಾಗಿ ಸಚಿವ ಸಂಪುಟ ರಚನೆಯ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿತ್ತು.

ರಾಹುಲ್ ಗಾಂಧಿ ಸಂಜೆ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ . ಈ ಕಾರಣದಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಕಾರ್ಯಕ್ರಮ ರದ್ದಾಗಿದೆ. ಹೀಗಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ರಾತ್ರಿ 9 ಗಂಟೆಗೆ ಹೊಸದಿಲ್ಲಿಗೆ ತೆರಳಲಿದ್ದಾರೆ. ಸೋಮವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕುಮಾರಸ್ವಾಮಿ ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News