×
Ad

ದಾವಣಗೆರೆ: ಜವಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮ

Update: 2018-05-27 20:59 IST

ದಾವಣಗೆರೆ,ಮೇ.27: ಪ್ರಧಾನ ಮಂತ್ರಿ ಪಂಡಿತ್‍ ಜವಹರಲಾಲ್ ನೆಹರುರವರು ಭಾರತ ಸ್ವಾತಂತ್ರ್ಯಸಂಗ್ರಾಮದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಜೊತೆಗೂಡಿ ಭಾರತಕ್ಕೆ ಸ್ವಾತಂತ್ರ್ಯ ಕೊಡಿಸಿ ದೇಶದ ಪ್ರಪ್ರಥಮ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ದೇಶದ ಸರ್ವೋತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದವರು ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್ ಸ್ಮರಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಏರ್ಪಡಿಸಿದ್ದ ಪಂಡಿತ್ ಜವಹರಲಾಲ್ ನೆಹರೂರವರ 54ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರೂರವರು ಪ್ರಜಾಪ್ರಭುತ್ವಕ್ಕರ ಬಹಳ ಗೌರವ ನೀಡುತ್ತಿದ್ದರು. ಅವರು ಒಬ್ಬ ಉತ್ತಮ ಆಡಳಿತಗಾರರಾಗಿದ್ದರು ಎಂದರು.

ಪಂಡಿತ್ ಜವಹಲಾಲ್ ನೆಹರುರವರು ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೆ ಬಂದ ಮೇಲೆ ಬೃಹತ್ ಪ್ರಮಾಣದ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ಕೈಗಾರಿಕೆ ಕೃಷಿ ಕ್ಷೇತ್ರಗಳ ಅಭಿವೃದ್ಧಿಗೆ ಮುಖ್ಯವಾಗಿ ನೀರಾವರಿ ಮತ್ತು ವಿದ್ಯುತ್‍ಗೆ ಹೆಚ್ಚಿನ ಆದ್ಯತೆ ನೀಡಿದರು. ಭಾರತದ ಇಂದಿನ ಪ್ರಗತಿಗೆ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಸಾಕ್ಷಿಯಾಗಿವೆಂದರು.

ಕೆಪಿಸಿಸಿ ಕಾರ್ಯದರ್ಶಿ ಕೆ.ಜಿ. ರಹಮತ್ತುಲ್ಲಾ ಮತ್ತು ಅಬ್ದುಲ್ ಜಬ್ಬಾರ್ ಮಾತನಾಡಿದರು. ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಆಶ್ರಫ್ ಅಲಿ, ಡಿ. ಶಿವಕುಮಾರ್, ಜಿಲ್ಲಾ ಪ್ರಧಾನಿ ಕಾರ್ಯದರ್ಶಿ ಖಾಜಿ ಖಲೀಲ್, ಅಯಾಜ್, ಲಿಯಾಖತ್ ಅಲಿ ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News