×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-05-27 21:56 IST

ಬ್ರಹ್ಮಾವರ, ಮೇ 27: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ಪೂಜಾರ್ತಿ(68) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 26ರಂದು ಸಂಜೆ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಹಿಂದಿನ ತೋಟದಲ್ಲಿ ಕ್ರಿಮಿನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ವಿಪರೀತ ಮದ್ಯಪಾನ ಸೇವನೆಯ ಚಟ ಹೊಂದಿದ್ದ ಬೇಳಂಜೆ ಗ್ರಾಮದ ಕಮ್ತ ನಿವಾಸಿ ಪುಟ್ಟ ನಾಯ್ಕ (46) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 26ರಂದು ಸಂಜೆ ವೇಳೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News