ಉಡುಪಿ; ವಿಧಾನ ಪರಿಷತ್ ಚುನಾವಣೆ ಬಿಜೆಪಿ ಪೂರ್ವಭಾವಿ ಸಭೆ
ಉಡುಪಿ, ಮೇ 27: ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ನಡೆಸಿದ ಶ್ರಮ ಮತ್ತು ಕಾರ್ಯತಂತ್ರವನ್ನು ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರೆಸಿದರೆ ಶೇ.100ಕ್ಕೆ 100 ಗೆಲುವು ನಮ್ಮದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಪೂರ್ವಭಾವಿ ಸೆಯಲ್ಲಿ ಅವರು ಮಾತನಾಡುತಿದ್ದರು.
ಬಿಜೆಪಿಯ ಮುಂದಿನ ಗುರಿ ಲೋಕಸಭೆ, ವಿಧಾನ ಪರಿಷತ್ ಹಾಗೂ ರಾಜ್ಯದ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು. ರಾಜ್ಯ ದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜನರ ಭಾವನೆ ಬೆಲೆ ಇಲ್ಲವಾಗಿದೆ. ಚುನಾವಣೆಯ ಮೊದಲು ಜೆಡಿಎಸ್- ಕಾಂಗ್ರೆಸ್ ಕಾರ್ಯ ಕರ್ತರು ಹೊಡೆದಾಟ ನಡೆಸಿ ಆಸ್ಪತ್ರೆ ದಾಖಲಾಗಿದ್ದರು. ಆದರೆ ಈಗ ಅವರ ನಾಯಕರು ಒಂದಾಗಿ ಸರಕಾರ ರಚನೆ ಮಾಡಿದ್ದಾರೆಂದು ಅವರು ಟೀಕಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಸುನೀಲ್ ಕುಮಾರ್, ಹಾಲಾಡಿ ಶ್ರೀನಿ ವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್ ಸ್ವಾಗತಿಸಿದರು. ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.