ಗುಡುಗು ಮಿಂಚು ಸಹಿತ ಮಳೆ: ಐಪಿಎಲ್ ವೀಕ್ಷಣೆಗೆ ಅಡ್ಡಿ
Update: 2018-05-27 22:28 IST
ಮಂಗಳೂರು, ಮೇ 27: ಇಂದು ಸಂಜೆ ಮಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಗೆ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಣೆಗೆ ಅಡಚಣೆಯಾಗಿದೆ.
ರವಿವಾರ ಐಪಿಎಲ್ ಕ್ರಿಕೆಟ್ ಮ್ಯಾಚ್‌ನ ಫೈನಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ನಗರ ನೆಹರೂ ಮೈದಾನದಲ್ಲಿ ಎಲ್‌ಇಡಿ ಪರದೆ ಮೂಲಕ ಸಾರ್ವಜನಿಕರಿಗೆ ಮ್ಯಾಚ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಸಂಜೆ ಸುಮಾರು 6 ಗಂಟೆಯ ಬಳಿಕ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿತ್ತು. ಮಳೆಯಿಂದಾಗಿ ಸಾರ್ವಜನಿಕರಿಗೆ ವೀಕ್ಷಣೆಗೆ ಅಡಚಣೆಯಾಗಿತ್ತು.