×
Ad

ರೌಡಿಶೀಟರ್‌ ಕೊಲೆ ಪ್ರಕರಣ: ಆರು ಜನರ ಬಂಧನ

Update: 2018-05-28 19:54 IST

ಬೆಂಗಳೂರು, ಮೇ 28: ರೌಡಿಶೀಟರ್‌ವೊಬ್ಬನನ್ನು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದ ಪ್ರಕರಣ ಸಂಬಂಧ ಆರು ಜನರನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ನಗರದ ಪ್ರಕಾಶ್, ದಿನೇಶ್ ಸೇರಿ ಆರು ಜನರನ್ನು ಬಂಧಿಸಿರುವ ಪೊಲೀಸರು, ಮತ್ತಷ್ಟು ಆರೋಪಿಗಳಿಗಾಗಿ ತನಿಖೆ ಕೈಗೊಂಡಿದ್ದಾರೆ.

ಪ್ರಕರಣದ ವಿವರ: ಬೆಂಗಳೂರಿನ ವಸಂತನಗರದ ರೌಡಿಶೀಟರ್ ಕವಳನ ಸಂಬಂಧಿ ರಾಕೇಶ್ ಯಾನೆ ಜಾಕಿ ಎಂಬಾತನನ್ನು ಮೇ 18ರಂದು ನಡು ಬೀದಿಯಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಗಂಭೀರ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಪ್ರಕಾಶ್ ಎಂಬಾತ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News