×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-05-28 20:38 IST

ಬ್ರಹ್ಮಾವರ, ಮೇ 28: ಅನಾರೋಗ್ಯದಿಂದ ಬಳಲುತ್ತಿದ್ದ ಹೇರೂರು ನಿವಾಸಿ ಕಸ್ತೂರಿ ಶೆಟ್ಟಿ(72) ಎಂಬವರು ವೃಧ್ಯಾಪದಲ್ಲಿ ತನನ್ನು ನೋಡಿಕೊಳ್ಳುವವರು ಯಾರೂ ಇಲ್ಲ ಎಂಬ ಚಿಂತೆಯಲ್ಲಿ ಮೇ 28ರಂದು ಬೆಳಗ್ಗೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕೆರ್ಗಾಲ್ ಗ್ರಾಮದ ಐತಾಳಬೆಟ್ಟು ನಿವಾಸಿ ಕುಪ್ಪಯ್ಯ ಕೊಠಾರಿ(75) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮೇ 28ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News