ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಶೇ. 100 ಫಲಿತಾಂಶ
Update: 2018-05-29 17:15 IST
ಮಂಗಳೂರು, ಮೇ 29: ಕಳೆದ ಮಾರ್ಚ್-ಎಪ್ರಿಲ್‌ನಲ್ಲಿ (ಸಿಬಿಎಸ್ಇ) ನಡೆಸಿದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮಂಗಳೂರಿನ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆ 100% ಫಲಿತಾಂಶವನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 161 ವಿದ್ಯಾರ್ಥಿಗಳಲ್ಲಿ, 61 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 81 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಮತ್ತು 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಎಸ್ ನಿರುಪಮಾ 489 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.