×
Ad

ಮೇ 30ರಂದು ರೈತ ಸಂಘಟನೆಗಳ ಸಭೆ ಕರೆದ ಸಿಎಂ

Update: 2018-05-29 18:19 IST

ಬೆಂಗಳೂರು, ಮೇ 29: ಕೃಷಿ ಸಾಲ ಮನ್ನಾ,  ರೈತರ ಆತ್ಮಹತ್ಯೆ ಹಾಗೂ ಕೃಷಿಕರ ಇತರ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೇ 30 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಪ್ರಗತಿಪರ ಕೃಷಿಕರ ಸಭೆ ಕರೆದಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಸಹ ಈ ಸಭೆಗೆ ಆಹ್ವಾನಿಸಲಾಗಿದೆ. ಅಲ್ಲದೆ, ಪ್ರತಿ ಜಿಲ್ಲೆಯಿಂದ ಪ್ರಗತಿಪರ ಕೃಷಿಕರನ್ನು ಈ ಸಭೆಗೆ ಅಹ್ವಾನಿಸಲಾಗಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಸಭೆ ಏರ್ಪಡಿಸುವ ಬಗ್ಗೆ ಇಂದು ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ. ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಯಶಸ್ವಿನಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಶಸ್ವಿನಿ ಯೋಜನೆ ಹಾಗೂ ಇತ್ತೀಚೆಗೆ ಜಾರಿಗೊಳಿಸಲಾದ ಅರೋಗ್ಯ ಕರ್ನಾಟಕ ಯೋಜನೆ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಯೋಜನೆಗಳಿಂದ ಬಡವರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಕುರಿತು ಎಲ್ಲ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಮಾಹಿತಿಯೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ಅವರಿಗೆ ಸೂಚಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News