ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮಾಹಿತಿ ಪಡೆದ ಸಿಎಂ
Update: 2018-05-29 18:21 IST
ಬೆಂಗಳೂರು, ಮೇ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರವಾಹದಿಂದ ಸಾರ್ವಜನಿಕರನ್ನು ರಕ್ಷಿಸಲು ಅಗತ್ಯವಿದ್ದಲ್ಲಿ ಕೋಸ್ಟ್ ಗಾರ್ಡ್ ನೆರವು ಪಡೆಯುವಂತೆ ಹಾಗೂ ಹೆಚ್ಚಿನ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.