×
Ad

ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2018-05-29 20:40 IST

ಮಂಗಳೂರು, ಮೇ 29: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಂತೂರು ಬಳಿ ಮಂಗಳವಾರ ನಡೆದಿದೆ.

ಪಾದಚಾರಿ ಕುಲಶೇಖರ ನಂತೂರುಪದವು ತುಕ್ರ ಕಾಂಪೌಂಡ್ ನಿವಾಸಿ ರಾಜೇಶ್ ಕರ್ಕೇರ (35) ಮೃತಪಟ್ಟವರು. ಇವರು ಮಂಗಳವಾರ ಮಧ್ಯಾಹ್ನ ಸುಮಾರು 1 ಗಂಟೆ ಹೊತ್ತಿಗೆ ನಡೆದುಕೊಂಡು ಹೋಗುತ್ತಿದ್ದಾಗ ಯಾವುದೋ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.

ಢಿಕ್ಕಿಯ ಹೊಡೆತಕ್ಕೆ ರಾಜೇಶ್ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News