×
Ad

ವಿಶ್ವ ತಾಯಂದಿರ ದಿನ: ಉಚಿತ ಮಾಹಿತಿ ಶಿಬಿರ

Update: 2018-05-29 20:44 IST

ಉಡುಪಿ, ಮೇ 29: ಕುತ್ಪಾಡಿ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ಹಾಗೂ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ವತಿಯಿಂದ ಉಡುಪಿ ತಾಲೂಕು ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ, ಹೆಗ್ಗುಂಜೆ ಭಾಗ್ಯಲಕ್ಷ್ಮಿ ಜ್ಞಾನ ವಿಕಾಸ ಕೇಂದ್ರ, ಪ್ರಗತಿಬಂಧು ಸಂಘಗಳ ಒಕ್ಕೂಟ ಇವುಗಳ ಸಹಯೋಗ ದೊಂದಿಗೆ ಮಹಿಳೆಯರಿಗೆ ಉಚಿತ ಆರೋಗ್ಯ ಮಾಹಿತಿ, ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ರವಿವಾರ ಮಂದರ್ತಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು.

ಶಿಬಿರವನ್ನು ಮಂದರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ. ಸ್ತ್ರೀಯರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗದ ಪ್ರಾಧ್ಯಾಪಕಿ ಡಾ. ರಮಾದೇವಿ ಜಿ. ಗರ್ಭಿಣಿ ಹಾಗೂ ಬಾಣಂತಿಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ರವೀಂದ್ರ, ಪ್ರಭಾಕರ್, ಮಾಲತಿ ಉಪಸ್ಥಿತರಿದ್ದರು. ಲಕ್ಷ್ಮೀ ಸ್ವಾಗತಿಸಿ ಶಾರದ ವಂದಿಸಿದರು. ಉಡುಪಿ ತಾಲೂಕು ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಜ್ಯೋತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವೈದ್ಯರುಗಳಾದ ಡಾ.ಮಮತಾ ಕೆ.ವಿ., ಡಾ.ರಮಾದೇವಿ, ಡಾ.ಸುಚೇತ, ಡಾ.ಅರ್ಪಣಾ ತಪಾಸಣೆ ನಡೆಸಿದರು. ಶಿಬಿರದಲ್ಲಿ 100ಕ್ಕೂ ಅಧಿಕ ಮಹಿಳೆ ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News