×
Ad

ನೈರುತ್ಯ ಕ್ಷೇತ್ರ: ದಿನೇಶ್, ಕೆ.ಕೆ.ಮಂಜುನಾಥ್ ಪಕ್ಷದ ಅಧಿಕೃತ ಅಭ್ಯರ್ಥಿಗಳು-ಹರೀಶ್ ಕುಮಾರ್‌

Update: 2018-05-29 20:47 IST

ಮಂಗಳೂರು, ಮೇ 29: ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಪಿ.ದಿನೇಶ್ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್‌ರವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ಪಾರಂ ನೀಡಲಾಗಿದೆ ಇತರ ಯಾರೂ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣದಲ್ಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜೂನ್ 8ರಂದು ನಡೆಯಲಿರುವ ನೈರುತ್ಯ ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಅಭ್ಯರ್ಥಿಗಳಾಗಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿದ್ದರೂ ಕೆಲವರು ಮತದಾರರಲ್ಲಿ ಗೊಂದಲ ಸೃಷ್ಟಿಸಿ ಪಕ್ಷೇತರ ಅಭ್ಯರ್ಥಿಯೊಬ್ಬರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿಂಬಿಸುತ್ತಿದ್ದಾರೆ. ಈ ಬಗ್ಗೆ ಗೊಂದಲ ಬೇಡ ಪಕ್ಷದ ಅಧಿಕೃತ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಹರೀಶ್ ಕುಮಾರ್ ಮನವಿ ಮಾಡಿದ್ದಾರೆ.

ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರುವ ಸವಾಲನ್ನು ಬಿಜೆಪಿ ಸ್ವೀಕರಿಸಲಿ:-

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅವಧಿಯಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಿ. ಒಂದು ವೇಳೆ ಹಳೆ ಪಿಂಚಣಿ ಯೋಜನೆಯನ್ನು ಜೂನ್ 8ರ ಒಳಗೆ ಬಿಜೆಪಿ ಜಾರಿಗೆ ತಂದರೆ ನಾನು ಅವರನ್ನು ಬೆಂಬಲಿಸುತ್ತೇನೆ.ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ನೈರುತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ.ದಿನೇಶ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೈರುತ್ಯ ಪದವಿಧರ ಕ್ಷೇತ್ರದ ಅಂತಿಮ ಪಟ್ಟಿಯಲ್ಲಿ 67,306 ಮತದಾರರಿದ್ದಾರೆ. ಈ ಪೈಕಿ ಗರಿಷ್ಠ ಸಂಖ್ಯೆಯ ಮತದಾರರು ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 27,500 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,000 ಪದವಿಧರ ಕ್ಷೇತ್ರದ ಮತದಾರರಿದ್ದಾರೆ ಎಂದು ದಿನೇಶ್ ತಿಳಿಸಿದ್ದಾರೆ.

ಎರಡು ಸಂಸ್ಥೆಗಳಿಗೆ ಮಾತ್ರ ಎಂಎಲ್‌ಸಿ :- ಕಳೆದ 24 ವರ್ಷಗಳಿಂದ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ವಿಧಾನ ಪರಿಷತ್‌ನಲ್ಲಿರುವ ಬಿಜೆಪಿ ಶಾಸಕರು ಕೇವಲ ‘ಎರಡು’ ಸಂಸ್ಥೆಗಳ ಪ್ರತಿನಿಧಿಯಾಗಿ ಮಾತ್ರ ಕಾರ್ಯನಿರ್ವಹಿಸಿದ್ದಾರೆ.ಸಮಗ್ರ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸ್ಪಂದಿಸಲಿಲ್ಲ ಕ್ಷೇತ್ರದಲ್ಲಿ ಜಯಗಳಿಸಲು ಮತವಿಭಜನೆಗಾಗಿ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ. ಮತ ವಿಭಜನೆ ಹೊಸ ಅಭ್ಯರ್ಥಿಗಳನ್ನು ನಿಲ್ಲಿಸುವುದು, ಆಮಿಷಗಳನ್ನು ಒಡ್ಡುವುದು ನಡೆಯುತ್ತಿದೆ. ಶಿಕ್ಷಕರು ಈ ತಂತ್ರಗಳಿಗೆ ಬಲಿಯಾಗಲಾರರು ಎನ್ನುವ ವಿಶ್ವಾಸ ತನ್ನಲ್ಲಿದೆ ಎಂದು ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳಾದ ಸಂತೋಷ್ ಶೆಟ್ಟಿ,ರಘು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News