×
Ad

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Update: 2018-05-29 23:13 IST

ಬೆಂಗಳೂರು, ಮೇ 29: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗಾಂಧಿ ವೃತ್ತದ ಬಳಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಮಂಗಳವಾರ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ದಿನ ಬಳ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸಿಗದಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ರೋಬಿನ್ ಮ್ಯಾಥ್ಯೂಸ್ ಮಾತನಾಡಿ, ಹುಸಿ ಭರವಸೆಗಳನ್ನು ನೀಡುವ ಮೂಲಕ ಎನ್‌ಡಿಎ ಸರಕಾರದ ಅಧಿಕಾರಕ್ಕೇರಿತು. ಆದರೆ, ಇಂದು ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇನ್ನು, ಕೃಷಿ ಯಂತ್ರೋಪಕರಣ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದಾರೆ. ತೊಂದರೆಗೊಳಗಾಗಿದ್ದಾರೆ ಎಂದು ಆರೋಪಿಸಿದರು.

ಮೋದಿ ನೇತೃತ್ವದ ಎಡಿಎ ಸರಕಾರ ಈ ಕೂಡಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಲಕಲು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದ ಅವರು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಈ ಕೂಡಲೇ ಇಳಿಸದಿದ್ದಲ್ಲಿ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಮಂಜಪ್ಪ, ಪದಾಧಿಕಾರಿಗಳಾದ ಮುನಿಸ್ವಾಮಿ, ಜುಮರಿ, ಇಕ್ಬಾಲ್ ಅಹಮದ್ ಹುಸೇನ್, ಪ್ರೊ.ಜೆ.ಕೆ.ಸಿ. ರೆಡ್ಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News