ಬೆಂಗಳೂರು: ರಾಮಚಂದ್ರಗೆ ಎಂಎಲ್ಸಿ ಸ್ಥಾನ ನೀಡಲು ಆಗ್ರಹ

Update: 2018-05-29 18:32 GMT

ಬೆಂಗಳೂರು, ಮೇ 29: ವಾಲ್ಮೀಕಿ ಸಮುದಾಯದ ಮುಖಂಡರಾದ ಚಾಮರಾಜನಗರ ಜಿಲ್ಲೆಯ ಎಂ.ರಾಮಚಂದ್ರ ಅವರನ್ನು ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂದು ವಾಲ್ಮೀಕಿ ನಾಯಕರ ಯುವ ವೇದಿಕೆ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಬಾಲರಾಜನಾಯ್ಕ, ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಎಂ.ರಾಮಚಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಲು ಟಿಕೆಟ್ ನೀಡಲಾಗುತ್ತದೆ ಎಂದು ಭರವಸೆ ನೀಡಿ, ಕೊನೆಗಳಿಗೆಯಲ್ಲಿ ಕೈ ತಪ್ಪಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸ್ಥಾನ ನೀಡುವ ಭರವಸೆ ನೀಡಿದ್ದು, ಅದನ್ನು ನೆರವೇರಿಸಬೇಕು ಎಂದು ಮನವಿ ಮಾಡಿದರು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ನಾಯಕರ ಸಂಘದ ಉಪಾಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅನುಭವವಿದೆ. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಸಮುದಾಯದ ಮತಗಳನ್ನು ಕ್ರೋಡೀಕರಿಸಲು ಸಾಧ್ಯವಾಗುತ್ತದೆ. ಒಂದು ವೇಳೆ ನಮ್ಮ ಸಮುದಾಯದ ಮುಖಂಡರನ್ನು ನಿರ್ಲಕ್ಷಿಸಿದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದ ಎದುರು ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News