ಜೂ.5ರ ತನಕ ಚಿದಂಬರಂ ವಿರುದ್ಧ ಕ್ರಮಕೈಗೊಳ್ಳದಂತೆ ದಿಲ್ಲಿ ನ್ಯಾಯಾಲಯ ಆದೇಶ

Update: 2018-05-30 08:21 GMT

 ಹೊಸದಿಲ್ಲಿ, ಮೇ 30: ಏರ್‌ಸೆಲ್-ಮ್ಯಾಕ್ಸಿಸ್ ಹಣ ಅವ್ಯವಹಾರಕ್ಕೆ ಸಂಬಂಧಿಸಿ ಜೂ.5 ರಂದು ಮುಂದಿನ ವಿಚಾರಣೆ ನಡೆಯುವ ತನಕ ಚಿದಂಬರಂ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ ದಿಲ್ಲಿ ನ್ಯಾಯಾಲಯ ಆದೇಶಿಸಿದೆ.

ತನ್ನ ಪುತ್ರ ಕಾರ್ತಿ ಚಿದಂಬರಂ ಆರೋಪಿಯಾಗಿರುವ ಏರ್‌ಸೆಲ್-ಮ್ಯಾಕ್ಸಿಸ್ ಹಣ ಅವ್ಯವಹಾರ ಪ್ರಕರಣದಲ್ಲಿ ತನ್ನನ್ನು ಬಂಧನದಿಂದ ರಕ್ಷಿಸಬೇಕೆಂದು ಕೋರಿ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ದಿಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕ ಕಪಿಲ್ ಸಿಬಲ್ ನ್ಯಾಯಾಲಯದಲ್ಲಿ ಚಿದಂಬರಂ ಪರ ವಾದ ಮಂಡಿಸಿದರು.

2006ರಲ್ಲಿ ಏರ್‌ಸೆಲ್-ಮ್ಯಾಕ್ಸಿಸ್ ಒಪ್ಪಂದದಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ಮಾಡಿಕೊಟ್ಟಿದ್ದಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. 2006ರಲ್ಲಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರದಲ್ಲಿ ಚಿದಂಬರಂ ವಿತ್ತ ಸಚಿವರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News