ಜೂ. 2ರಂದು ಕಥಕ್ ನೃತ್ಯ ಸಂಭ್ರಮ
ಮಂಗಳೂರು, ಮೇ 30: ದೇಶ ವಿದೇಶಗಳಲ್ಲಿ ಕಥಕ್ ನೃತ್ಯ ಪ್ರದರ್ಶನ ನೀಡಿರುವ ಬೆಂಗಳೂರಿನ ಹರಿ ಮತ್ತು ಚೇತನಾ ದಂಪತಿ ಜೂನ್ 2ರಂದು ನಗರದ ಪುರಭವನದಲ್ಲಿ ಕಥಕ್ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ ಎಂದು ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ನರೇಂದ್ರ ಎಲ್. ನಾಯಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಸಂಜೆ 5 ಗಂಟೆಗೆ ‘ಕಥಕ್ ಸಂಭ್ರಮ್’ ಎಂಬ ಕಾರ್ಯಕ್ರಮದಲ್ಲಿ ಈ ಜೋಡಿ ಕೃಷ್ಣನ ಮೇಲಿನ ಭಕ್ತಿಯನ್ನು ಕಥಕ್ ಮೂಲ ಪ್ರಸ್ತುತಪಡಿಸಲಿದ್ದಾರೆ ಎಂದರು.
ದಿ. ಶಂಕರ್ ವಿಠಲ್ ಮೋಟಾರ್ಸ್ ಕಂಪನಿ ಲಿಮಿಟೆಡ್ ಮತ್ತು ನೂಪುರ್ ಪರ್ಫೋಮಿಂಗ್ ಆರ್ಟ್ಸ್‌ನ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ನಿಟ್ಟೆ ವಿಶ್ವವಿದ್ಯಾಲಯ ಹಾಗೂ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್, ಮಂಗಳೂರಿನ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿದೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಡಾ. ಆರೂರ್ ಪ್ರಸಾದ್ ರಾವ್, ಸುಧಾಕರ ಪೇಜಾವರ, ಕರುಣಾಕರ ಬಳ್ಕೂರು ಉಪಸ್ಥಿತರಿದ್ದರು.