ಜೂ.1 ರಂದು ಸಿಇಟಿ ಫಲಿತಾಂಶ

Update: 2018-05-30 15:22 GMT

ಬೆಂಗಳೂರು, ಮೇ 30: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ್ದ 2018ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಜೂ.1ರಂದು ಪ್ರಕಟವಾಗಲಿದೆ.

ಎಂಜಿನಿಯರಿಂಗ್, ತಂತ್ರಜ್ಞಾನ, ಬಿ- ಫಾರ್ಮಾ, ಫಾರ್ಮಾ-ಡಿ ಹಾಗೂ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರವೇಶಕ್ಕಾಗಿ ಎ. 18 ಮತ್ತು 19ರಂದು ಪರೀಕ್ಷೆ ನಡೆಸಲಾಗಿತ್ತು. 1.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬೆಂಗಳೂರು ನಗರದ 86 ಕೇಂದ್ರಗಳು ಸೇರಿದಂತೆ ರಾಜ್ಯದ 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶ ಪ್ರಕಟಿಸುವ ವೆಬ್‌ಸೈಟ್ ಸೇರಿದಂತೆ ಹೆಚ್ಚಿನ ಮಾಹಿತಿಗಳನ್ನು ಪರೀಕ್ಷಾ ಪ್ರಾಧಿಕಾರವು ಇಂದು ಅಧಿಕೃತವಾಗಿ ಪ್ರಕಟಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News