×
Ad

ಎನ್.ಮಹೇಶ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯ

Update: 2018-05-30 21:24 IST

ಬೆಂಗಳೂರು, ಮೇ 30: ಬಿಎಸ್ಪಿ ರಾಜ್ಯಾಧ್ಯಕ್ಷ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರಿಗೆ ಸಮಾಜ ಕಲ್ಯಾಣ ಸಚಿವ ಸ್ಥಾನ ನೀಡಬೇಕೆಂದು ವಿವಿಧ ಸಂಘಟನೆಗಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಒತ್ತಾಯಿಸಿವೆ.

ಈ ಬಗ್ಗೆ ಬುಧವಾರ ಬರೆದಿರುವ ಕರ್ನಾಟಕ ವಾಲ್ಮೀಕಿ ನಾಯಕ ಪರಿಷತ್ತು ಹಾಗೂ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ, 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷವೂ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಅದರಂತೆ, ಇದೀಗ ಸಮ್ಮಿಶ್ರ ಸರಕಾರ ಬಂದಿದೆ. ಬಿಎಸ್ಪಿ ಪಕ್ಷದ ಎನ್.ಮಹೇಶ್ ಅವರಿಗೆ ಕ್ಯಾಬಿನೆಟ್ ದರ್ಜೆ ಹಾಗೂ ಸಮಾಜ ಕಲ್ಯಾಣ ಸಚಿವನ್ನಾಗಿ ಮಾಡಬೇಕೆಂದು ಕೋರಿದ್ದು, ದಲಿತ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಹೆಚ್ಚು ಅನುಕೂಲವಾಗಲಿದೆ. ಅಲ್ಲದೆ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದಂತಾಗುತ್ತದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News