ಬಾಲಕಿಯ ಅತ್ಯಾಚಾರ ಗೈಯಲು ಮೈದುನನಿಗೆ ನೆರವಾದ ಮಹಿಳೆಯ ಬಂಧನ

Update: 2018-05-30 16:00 GMT

ಲಕ್ನೊ, ಮೇ 30: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ತನ್ನ ಮೈದುನನಿಗೆ ನೆರವಾದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಮಥುರಾ ಬಳಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮಹಿಳೆ ನೆಪವೊಡ್ಡಿ ತನ್ನ ಮನೆಗೆ ಕರೆಸಿಕೊಂಡಿದ್ದಾಳೆ. ಅಲ್ಲಿ ಆಕೆಯ ಮೈದುನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಈ ಕೃತ್ಯವನ್ನು ವೀಡಿಯೊ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಅತ್ಯಾಚಾರ ನಡೆಸಲು ಮಹಿಳೆ ನೆರವಾಗಿದ್ದಳು ಎನ್ನಲಾಗಿದೆ.

ಎರಡು ತಿಂಗಳ ಹಿಂದೆ ಈ ಕೃತ್ಯ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದ ಘಟನೆಯ ವೀಡಿಯೊ ದೃಶ್ಯಾವಳಿ ಕುರಿತು ಸಂತ್ರಸ್ತ ಬಾಲಕಿಯ ತಂದೆ ವಿಚಾರಿಸಿದಾಗ ಬಾಲಕಿ ವಿಷಯ ತಿಳಿಸಿದ್ದಾಳೆ. ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಸಹೋದರನನ್ನು ಕೊಲ್ಲುವುದಾಗಿ ಆರೋಪಿ ಬೆದರಿಸಿದ್ದ ಕಾರಣ ಬಾಲಕಿ ಸುಮ್ಮನಿದ್ದಳು . ತಕ್ಷಣ ಮಹಿಳೆಯನ್ನು ಬಂಧಿಸಲಾಗಿದ್ದು ಆರೋಪಿ ನಾಪತ್ತೆಯಾಗಿದ್ದಾನೆ . ಈತನ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News