ಮರಳು ದಿಬ್ಬ ತೆರವು: ನಿಷೇಧ
ಉಡುಪಿ, ಮೇ 30:ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ 2017-18ನೇ ಸಾಲಿನಿಂದ ಒಂದು ವರ್ಷದ ಅವಧಿಗೆ ಮರಳು ದಿಬ್ಬವನ್ನು ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿತ್ತು. ಇದೇ ಜೂನ್1ರಿಂದ ಜುಲೈ 31ರವರೆಗೆ ಜಿಲ್ಲೆಯಲ್ಲಿ ಯಾಂತ್ರಿಕ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಅದರಂತೆ ಮುಂಗಾರು ಅವಧಿಯಲ್ಲಿ ಹಾಗೂ ಮೀನುಗಳ ಸಂತಾನೋತ್ಪತ್ತಿ ಸಮಯದಲ್ಲಿ ಜೂ.1ರಿಂದ ಜುಲೈ 31 ರವರೆಗೆ ಸಿಆರ್‌ಝಡ್ ಪ್ರದೇಶದ ಮರಳು ದಿಬ್ಬ ತೆರವುಗೊಳಿಸುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಈ ಅವಧಿಯಲ್ಲಿ ಯಾವುದೇ ಮರಳು ದಿಬ್ಬ ತೆರವುಗೊಳಿಸದಂತೆ, ಮರಳು ಸಾಗಾಣಿಕೆ ನಡೆಸದಂತೆ ಮತ್ತು ಮರಳು ತೆಗೆಯಲು ಬಳಸುತ್ತಿದ್ದ ದೋಣಿಗಳನ್ನು ನದಿ ದಡದಿಂದ ದೂರವಿಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಮರಳು ದಾಸ್ತಾನು ಮಾಡುವುದನ್ನು ಸಹ ನಿಷೇಧಿಸಲಾಗಿದೆ. ಆದ್ದರಿಂದ ಈ ಅವಧಿಯಲ್ಲಿ ಯಾವುದೇ ಮರಳು ದಿಬ್ಬ ತೆರವುಗೊಳಿಸದಂತೆ, ಮರಳು ಸಾಗಾಣಿಕೆ ನಡೆಸದಂತೆ ಮತ್ತು ಮರಳು ತೆಗೆಯಲು ಬಳಸುತ್ತಿದ್ದ ದೋಣಿಗಳನ್ನು ನದಿ ದಡದಿಂದ ದೂರವಿಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಮರಳು ದಾಸ್ತಾನು ಮಾಡುವುದನ್ನು ಸಹ ನಿಷೇಧಿಸಲಾಗಿದೆ. ಒಂದು ವೇಳೆ ಮರಳು ದಿಬ್ಬ ತೆರವುಗೊಳಿಸಲು / ಮರಳು ಸಾಗಾಣಿಕೆ/ ಮರಳು ದಾಸ್ತಾನು/ ಮರಳು ತೆಗೆಯಲು ಬಳಸುತ್ತಿದ್ದ ದೋಣಿಗಳು ನದಿಯಲ್ಲಿ ಕಂಡುಬಂದಲ್ಲಿ ಈ ದೋಣಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಹಾಗೂ ಅವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಲು ಕೋರೆ: ಗುತ್ತಿಗೆದಾರರಿಗೆ ಎಚ್ಚರಿಕೆ
ಜಿಲ್ಲೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿ ಗುತ್ತಿಗೆದಾರರಿಗೆ ಹಾಗೂ ಈಗಾಗಲೇ ಅವಧಿ ಮುಗಿದಿರುವ ಈ ಹಿಂದೆ ನಿರ್ವಹಿಸಿದ ಕಲ್ಲು ಗಣಿ ಗುತ್ತಿಗೆದಾರರಿಗೂ ಸಹ ಕಲ್ಲು ಕೋರೆಗಳ ಸುತ್ತಲೂ ತಂತಿ ಬೇಲಿ ಅಳವಡಿಸಿ ಅಪಾಯ ಎಂಬ ಸೂಚನಾ ಫಲಕವನ್ನು ಅಳವಡಿಸಲು ಸೂಚನೆ ನೀಡಲಾಗಿದ್ದು, ಇವುಗಳಿಂದ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿ ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಮಳೆಗಾಲದಲ್ಲಿ ಜಿಲ್ಲೆಯ ಕಲ್ಲು ಕೋರೆಗಳು ಹಾಗೂ ಈ ಹಿಂದೆ ನಿರ್ವಹಿಸಿದ ಕಲ್ಲು ಗುಂಡಿಗಳಲ್ಲಿ ನೀರು ಸಂಗ್ರಹವಾಗುವುದು ಸಹಜವಾಗಿದೆ. ಮಹಿಳೆಯರು ಮತ್ತು ಮಕ್ಕಳು, ಈ ಹಿಂದೆ ನಿರ್ವಹಿಸಿದ ಕಲ್ಲು ಗುಂಡಿಗಳಲ್ಲಿ ಅವಘಡಗಳು ಸಂಭವಿಸಿ ಪ್ರಾಣಕಳೆದುಕೊಂಡಿರುವುದು ಕಂಡು ಬಂದಿದೆ. ಆದುದರಿಂದ ಸಾರ್ವಜನಿಕರು ನೀರು ತುಂಬಿರುವ ಕಲ್ಲು ಗುಂಡಿಗಳ ಬಳಿ ಮಹಿಳೆಯರು ಮತ್ತು ಮಕ್ಕಳು ತೆರಳದಂತೆ ಜಾಗ್ರತೆ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.