ಹನೂರು: ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
Update: 2018-05-30 22:34 IST
ಹನೂರು,ಮೇ.30: ಮಲೆ ಮಹದೇಶ್ವರ ಬೆಟ್ಟದಿಂದ ತೆರಳುವ ವೇಳೆ ಬಸ್ ಅಪಘಾತಕ್ಕೀಡಾಗಿ ತುಮಕೂರು ಜಿಲ್ಲೆಯ ನಾಗವಳ್ಳಿ ಗ್ರಾಮದ ಕೆಲ ಪ್ರವಾಸಿಗರಿಗೆ ಗಾಯಗಳಾದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಡಕೆಹಳ್ಳ ಸಮೀಪ ಬಸ್ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ