ಮೈಸೂರು: ವಿಶ್ವ ತಂಬಾಕು ರಹಿತ ದಿನಾಚರಣೆ

Update: 2018-05-31 17:18 GMT

ಮೈಸೂರು,ಮೇ.31: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಮೈಸೂರು ಇಲ್ಲಿನ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಘೋಷಣೆಯೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಗುರುವಾರ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಯುವ ಜನತೆ ತಂಬಾಕಿನಿಂದ ಕೂಡಿರುವ ವಸ್ತುಗಳನ್ನು ಸೇವಿಸಿ ಬಲಿಯಾಗಬೇಡಿ. ತಂಬಾಕಿನಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಆವರಿಸಲಿದ್ದು, ಬದುಕೇ ಕತ್ತಲೆಯಾಗಲಿದೆ. ತಂಬಾಕು ಸೇವನೆಯಿಂದ ದೂರವಿರಿ ಎಂದು ಸಲಹೆ ನೀಡಿದರು. 

ಜಾಥಾದಲ್ಲಿ ಸರ್ಕಾರಿ ಶುಶ್ರೂಷ ಶಾಲೆ, ಕೆ.ಆರ್.ಆಸ್ಪತ್ರೆ ಎಂಎಂಸಿ, ಆರ್ ಐ ಮೈಸೂರು, ಜೆಎಸ್ ಎಸ್ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಕಾಲೇಜು, ಶಾಂತವೇರಿ ಮೆಮೋರಿಯಲ್ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಕಾಲೇಜು, ನಟರಾಜ ಸ್ಕೂಲ್ ಆಫ್ ನರ್ಸಿಂಗ್, ಪ್ಯಾರಾ ಮೆಡಿಕಲ್ ಶೈಕ್ಷಣಿಕ ಸಂಸ್ಥೆಗಳ 250ರಿಂದ 350 ವಿದ್ಯಾರ್ಥಿಗಳು, ಪ್ರಾಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. 

ಜಾಥಾ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಜನರಲ್ಲಿ ಜಾಗೃತಿ ಮೂಡಿಸಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಪಶುಪತಿ, ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News