×
Ad

ಮೈಸೂರು: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Update: 2018-05-31 22:58 IST

ಮೈಸೂರು,ಮೇ.31: ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ನಂಜನಗೂಡಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಮೃತನನ್ನು ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ನಿವಾಸಿ ಕುಮಾರ್ ಎಂಬುವರ ಮಗ ಮನೋಜ್ (22) ಎಂದು ಗುರುತಿಸಲಾಗಿದೆ. ಶಾಮಿಯಾನದ ಅಂಗಡಿಯಲ್ಲಿ ತಂದೆ ಜೊತೆ ಕೆಲಸ ಮಾಡುತ್ತಿದ್ದ ಈತ ನಿನ್ನೆ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News