ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಮೂಡಲಿ: ಇಮ್ತಿಯಾಝ್ ಅಹ್ಮದ್
ಬಂಟ್ವಾಳ, ಜೂ. 1: ತಾಲೂಕು ಕಾನೂನು ಸೇವೆಗಳ ಸಮಿತಿಯೂ ತಾಲೂಕಿನಾದ್ಯಂತ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದುಹಿರಿಯ ಸಿವಿಲ್ ನ್ಯಾಯಾಧೀಶ ಮುಹಮ್ಮದ್ ಇಮ್ತಿಯಾಝ್ ಅಹ್ಮದ್ ಹೇಳಿದ್ದಾರೆ.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಮೊಡಂಕಾಪುವಿನಲ್ಲಿ ಕಾರ್ಮೆಲ್ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಕಾನೂನು ಮಾಹಿತಿ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಾನವ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಕಾನೂನು ಹಾಸುಹೊಕ್ಕಾಗಿದೆ. ಆದ್ದರಿಂದ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಜೀವನಕ್ಕೆ ಅವಶ್ಯವಾದ ಕೆಲವು ಕಾನೂನು ತಿಳುವಳಿಕೆಯನ್ನು ಹೊಂದಿರಬೇಕು ಎಂದು ನುಡಿದರು. ಸಂಪನ್ಮೂವ್ಯಕ್ತಿ ಆಶಾಪ್ರಸಾದ್ ರೈ ಅವರು ಮಕ್ಕಳ ಕುರಿತಾದ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ದ.ಕ.ಕೇಂದ್ರ ಸರಕಾರಿ ವಕೀಲರಾದ ಪ್ರಸಾದ್ ಕುಮಾರ್ ರೈ, ಉಪಾಧ್ಯಕ್ಷ ಚಂದ್ರಶೇಖರ ಪುಂಚಮೆ, ಶಿಕ್ಷಣ ಸಂಯೋಜಕ ಶ್ರೀಕಾಂತ್, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎನಿಲ್ಡಾ ಡಿಸೋಜ ಉಪಸ್ಥಿತರಿದ್ದರು. ವಕೀಲ ಗಣೇಶ್ ಪೈ ಸ್ವಾಗತಿಸಿ, ವಕೀಲ ವಿನೋದ ಎಸ್. ವಂದಿಸಿ, ವಕೀಲ ವಿರೇಂದ್ರ ಎಂ.ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.