×
Ad

ಅಕ್ರಮ ಮರದ ದಿಮ್ಮಿ ಸಾಗಾಟ: ಆರೋಪಿ ಬಂಧನ

Update: 2018-06-01 19:13 IST

ಬಂಟ್ವಾಳ, ಜೂ.1: ಲಾರಿಯೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಲಾರಿ ಸಹಿತ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಎಂಬಲ್ಲಿ ಶುಕ್ರವಾರ ನಡೆದಿದೆ.

ಲಾರಿ ಚಾಲಕ, ಕೆದಿಲ ನಿವಾಸಿ ಆಶ್ರಫ್ ಬಂಧಿತ ಆರೋಪಿ. ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಎಂಬಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿಗಳು ಕಾರ್ಯಚರಣೆ ನಡೆಸಿ ಲಾರಿ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ತದನಂತರ ಜಾಮೀನಿನ ಮೇರೆಗೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.

ವಶಪಡಿಕೊಂಡ ಸೊತ್ತುಗಳ ಮೌಲ್ಯ ಸುಮಾರು ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ ಬಿ.,ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಜಿತೇಶ್ ಪಿ, ದಯಾನಂದ ಹಾಗೂ ಸಿಬ್ಬಂದಿ ಭಾಸ್ಕರ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News