ಶಾಸಕ ಎಚ್.ಕೆ.ಕುಮಾರಸ್ವಾಮಿಗೆ ಮಂತ್ರಿ ಸ್ಥಾನ ನೀಡಿ: ಛಲವಾದಿ ಮಹಾಸಭಾದಿಂದ ಎಚ್.ಡಿ.ಕುಮಾರಸ್ವಾಮಿಗೆ ಮನವಿ
Update: 2018-06-01 19:55 IST
ಬೆಂಗಳೂರು, ಜೂ.1: ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿಗೆ ಮಂತ್ರಿ ಪದವಿ ನೀಡಬೇಕೆಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಎಚ್.ಪಿ.ಕುಮಾರ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಛಲವಾದಿ ಸಮುದಾಯವು ಸುಮಾರು 45ರಿಂದ 50ಲಕ್ಷ ಜನಸಂಖ್ಯೆ ಹೊಂದಿದ್ದು, ಬಹುದೊಡ್ಡ ಸಮಾಜವಾಗಿರುತ್ತದೆ. ಹಾಗೂ ಹಳೆಯ ಮೈಸೂರು ಭಾಗದಲ್ಲಿ ಅತ್ಯಂತ ಅನುಭವಿ ರಾಜಕಾರಣಿಯಾಗಿದ್ದು, 6 ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ.
ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಜೆಡಿಎಸ್‌ಗೆ ಮತ್ತೊಂದು ಅವಕಾಶ ಲಬಿಸಿದ್ದು, ಎಚ್.ಕೆ.ಕುಮಾರಸ್ವಾಮಿಗೆ ಮಂತ್ರಿ ಸ್ಥಾನ ನೀಡಲೇಬೇಕು. ಒಂದು ವೇಳೆ ಜೆಡಿಎಸ್ ಇದರಿಂದ ವಿಮುಖರಾದರೆ ಛಲವಾದಿ ಸಮುದಾಯಕ್ಕೆ ಅವಮಾನ ಮಾಡಿದಂತೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.