ಬಿಎಂಟಿಸಿಯಲ್ಲಿ ಟಿಕೆಟ್ ರಹಿತ ಪ್ರಯಾಣ: 9.46 ಲಕ್ಷ ರೂ.ದಂಡ ವಸೂಲಿ

Update: 2018-06-01 14:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ. 1: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಾಹನಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 6,472 ಪ್ರಯಾಣಿಕರಿಂದ ಒಟ್ಟು 9,46,810 ರೂ.ದಂಡ ವಸೂಲಿ ಮಾಡಲಾಗಿದೆ.

ಎಪ್ರಿಲ್ ತಿಂಗಳಲ್ಲಿ ಸಂಸ್ಥೆಯ 28,918 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 6,472 ಮಂದಿ ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ಸಂಸ್ಥೆ ನಿರ್ವಾಹಕರ ಮೇಲೆ 2,470 ಪ್ರಕರಣ ದಾಖಲಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.

ಮಹಿಳೆಯರಿಗೆ ಮೀಸಲಿಟ್ಟ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 290 ಪುರುಷ ಪ್ರಯಾಣಿಕರಿಂದ 29 ಸಾವಿರ ರೂ.ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವ ವೇಳೆ ಅಧಿಕೃತ ಟಿಕೆಟ್ ಪಡೆದು ಪ್ರಯಾಣಿಸಬೇಕು ಎಂದು ಸಂಸ್ಥೆ ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News