ಜೂ.3 ರಂದು ಶತಮಾನೋತ್ಸವ ಸಮಾರಂಭ
Update: 2018-06-01 20:05 IST
ಬೆಂಗಳೂರು, ಜೂ.1: ಜ್ಯೋತಿ ನಗರ ವೈಶ್ಯ ಜೆ.ಬಿ.ಕೆಂಪಣ್ಣಶೆಟ್ಟರ ಧರ್ಮ ಸಂಸ್ಥೆಯ ಶತಮಾನೋತ್ಸವ ಸಮಾರಂಭವನ್ನು ಜೂ.3 ರಂದು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಎಂ.ಎಸ್.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಐ.ಎಸ್.ಶಿವಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್, ಮಾಜಿ ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ, ಮಾಜಿ ಸಭಾಪತಿ ವಿ.ಆರ್.ಸುದರ್ಶನ ಹಾಗೂ ಎನ್.ಶ್ರೀನಿವಾಸ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.