ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮುಂದೂಡಿಕೆ
Update: 2018-06-01 20:41 IST
ಬೆಂಗಳೂರು, ಜೂ. 1: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಜೂ.8ರಂದು ನಿಗದಿಯಾಗಿದ್ದ ಪೂರಕ ಪರೀಕ್ಷೆಯನ್ನು ಜೂ.29ಕ್ಕೆ ನಿಗದಿಗೊಳಿಸಲಾಗಿದೆ. ಜೂ. 8ಕ್ಕೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
ಅಲ್ಲದೆ, ಜೂ.11ರಂದು ಜಯನಗರ ಕ್ಷೇತ್ರದ ವಿಧಾನಸಭೆ ಮತ್ತು ಜೂ.21ರಿಂದ 28ರ ವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆ ಅದೇ ಪರೀಕ್ಷಾ ಕೇಂದ್ರದಲ್ಲಿ ನಡೆಯುವುದರಿಂದ ಪೂರಕ ಪರೀಕ್ಷೆಯನ್ನು ಜೂ.29ರಂದು ನಡೆಸಲು ಇಲಾಖೆ ತೀರ್ಮಾನಿಸಿದೆ ಎಂದು ಗೊತ್ತಾಗಿದೆ.