ವಿಶ್ವ ಪರಿಸರ ದಿನಾಚರಣೆ: ಸ್ವಚ್ಛತಾ ಕಾರ್ಯಕ್ರಮ
ಉಡುಪಿ, ಜೂ.1: ಜೂ.5ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.2,3,4 ಮತ್ತು 5ರಂದು ಜಿಲ್ಲೆಯ ವಿವಿಧ ಬೀಚ್‌ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜೂ.2ರಂದು ಪಡುಬಿದ್ರಿ ಬೀಚ್, 3ರಂದು ಕಾಪು ಬೀಚ್, 4ರಂದು ಮಲ್ಪೆಬೀಚ್ ಹಾಗೂ 5ರಂದು ತ್ರಾಸಿ-ಮರವಂತೆ ಬೀಚ್‌ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಪರಿಸರ, ಕೇಂದ್ರದ ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ, ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಉಡುಪಿ, ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಡಲ ತೀರ ನಿರ್ವಹಣಾ ಸಮಿತಿ ಹಾಗೂ ಕರಾವಳಿ ಪ್ರವಾಸೋದ್ಯಮ ಸಮಿತಿ ಇವರ ಸಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಜೂ.2ರಂದು ಪಡುಬಿದ್ರಿ ಬೀಚ್, 3ರಂದು ಕಾಪು ಬೀಚ್, 4ರಂದು ಮಲ್ಪೆಬೀಚ್ ಹಾಗೂ 5ರಂದು ತ್ರಾಸಿ-ಮರವಂತೆ ಬೀಚ್‌ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಪರಿಸರ, ಕೇಂದ್ರದ ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ, ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಉಡುಪಿ, ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಡಲ ತೀರ ನಿರ್ವಹಣಾ ಸಮಿತಿ ಹಾಗೂ ಕರಾವಳಿ ಪ್ರವಾಸೋದ್ಯಮ ಸಮಿತಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು, ವಿದ್ಯಾರ್ಥಿ ಗಳು ಹಾಗೂ ಸಂಘ-ಸಂಸ್ಥೆಗಳು ಕೈ ಜೋಡಿಸಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ವಾಗಿ ತ್ಯಜಿಸುವ ಆಂದೋಲನದಲ್ಲಿ ಪಾಲ್ಗೊಳ್ಳಲು ಹಾಗೂ ಈ ದಿನಗಳಂದು ಬೆಳಗ್ಗೆ 7:30ಕ್ಕೆ ನಿಗದಿತ ಬೀಚ್‌ಗಳಲ್ಲಿ ಹಾಜರಿರುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಬಿ.ಆರ್. ಪ್ರಕಟಣೆ ತಿಳಿಸಿದೆ.