ಕುಂದಾಪುರ: ಸ್ವಚ್ಛತಾ ಕಾರ್ಯಕ್ರಮ
Update: 2018-06-01 21:17 IST
ಉಡುಪಿ, ಜೂ.1: ಕುಂದಾಪುರ ಪುರಸಭೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಖಾರ್ವಿಕೇರಿ ವಾರ್ಡಿನಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಯಿತು.
ಪುರಸಬಾ ಅಧ್ಯಕ್ಷೆ ವಸಂತಿ ಮೋಹನ್ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭಾ ಮುಖ್ಯಾಧಿಕಾರಿ ವಾಣಿ ವಿ. ಆಳ್ವ, ಹಿರಿಯ ಆರೋಗ್ಯ ನಿರೀಕ್ಷಕ ಶರತ್ ಎಸ್ ಖಾರ್ವಿ, ಕಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ಮಂಜುನಾಥ ನಾಯ್ಕ, ಪೌರಕಾರ್ಮಿಕರು ಹಾಗೂ ಇತರರು ಭಾಗವಹಿಸಿದ್ದರು.