ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ವಿಗ್ರಹಗಳಿಗೆ ನಿಷೇಧ
Update: 2018-06-01 21:19 IST
ಉಡುಪಿ, ಜೂ.1: ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸಿ, ಜಲಮೂಲಗಳಿಗೆ ವಿಸರ್ಜನೆ ಮಾಡುವು ದನ್ನು ನಿಷೇಧಿಸಲಾಗಿದೆ. ಆದರೂ ಕೆಲವು ಕಡೆಗಳಲ್ಲಿ ಈಗಲೂ ಇವುಗಳ ತಯಾರಿ ನಡೆಯುತ್ತಿದ್ದು, ಈ ಕುರಿತಂತೆ ಜಿಲ್ಲೆಯ ಎಲ್ಲಾ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಇದನ್ನು ತಡೆಗಟ್ಟಲು ಕಾರ್ಯೋನ್ಮುಖ ವಾಗುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.