16 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ದಾಖಲೆಗಳ ಪರಿಶೀಲನೆ
ಬೆಂಗಳೂರು, ಜೂ.1: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆ ಜೂ.5 ರಿಂದ ನಡೆಯಲಿದ್ದು, ರಾಜ್ಯದ 16 ಕೇಂದ್ರಗಳಲ್ಲಿ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ.
ಎಲ್ಲೆಲ್ಲಿ: ದಾವಣಗೆರೆಯ ಇನ್ಸ್‌ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್, ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯ, ಕಲಬುರ್ಗಿಯ ಪಿಡಿಎ ಕಾಲೇಜ್ ಆಫ್ ಎಂಜಿನಿಯರಿಂಗ್, ವಿಜಯಪುರದ ಬಿಎಲ್‌ಡಿಇಎಎಸ್‌ಬಿಪಿ ಡಾಕ್ಟರ್ ಪಿಜಿ ಹಲಕಟ್ಟಿ ಎಂಜಿನಿಯರಿಂಗ್ ಕಾಲೇಜು, ಬೆಳಗಾವಿಯ ಜೈನ್ ಎಂಜಿನಿಯರಿಂಗ್ ಕಾಲೇಜು, ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅವಕಾಶ ನೀಡಲಾಗಿದೆ
ಕಾರವಾರದ ಗಿರಿದಬಾಯಿ ಸಾಯಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು, ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು, ಶಿವಮೊಗ್ಗದ ಜವಹರ್‌ಲಾಲ್ ನೆಹರು ಎಂಜಿನಿಯರಿಂಗ್ ಕಾಲೇಜು, ಹಾಸನದ ಸರಕಾರಿ ಎಂಜಿನಿಯರಿಂಗ್ ಕಾಲೇಜು, ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್, ಬೀದರ್‌ನ ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜು, ಕೊಪ್ಪಳದ ಕೊಪ್ಪಳ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜು ಮತ್ತು ಬೆಂಗಳೂರಿನ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.