×
Ad

ಹೆಚ್ಚುವರಿ ನ್ಯಾಯಮೂರ್ತಿಗಳಿಂದ ಪ್ರಮಾಣ ವಚನ ಸ್ವೀಕಾರ

Update: 2018-06-02 20:23 IST

ಬೆಂಗಳೂರು, ಜೂ. 2: ಹೈಕೋರ್ಟಿಗೆ ನೂತನವಾಗಿ ನೇಮಕವಾಗಿರುವ ಮೊಹಮ್ಮದ್ ನವಾಝ್ ಹಾಗೂ ಹರೆಕೊಪ್ಪತಿಮ್ಮಣ್ಣಗೌಡ ನರೇಂದ್ರಪ್ರಸಾದ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶನಿವಾರ ಇಲ್ಲಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ, ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪದವಿ ಹಾಗೂ ಅಧಿಕಾರ ಪ್ರಮಾಣ ವಚನವನ್ನು ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸೇರಿದಂತೆ ಹೈಕೋರ್ಟಿನ ಹಿರಿಯ ನ್ಯಾಯಾಧೀಶರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News