ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

Update: 2018-06-02 15:21 GMT

ಉಡುಪಿ, ಜೂ.2:ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮತ್ತು ಘಟ್ಟದಕೋರೆ), ಮೂಡಲಪಾಯ,ಯಕ್ಷಗಾನ ತಾಳಮದ್ದಳೆ ಇತ್ಯಾದಿ ಕಲಾ ಪ್ರಕಾರಗಳಲ್ಲಿ 2017ನೇ ಸಾಲಿನಲ್ಲಿ (ಜನವರಿಯಿಂದ ಡಿಸೆಂಬರ್‌ವರೆಗೆ) ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಗಳನ್ನು ಆಹ್ವಾನಿಸಿದೆ.

2017ನೇ ಸಾಲಿನಲ್ಲಿ ಪ್ರಕಟವಾಗಿ ಆಯ್ಕೆಯಾದ ಪುಸ್ತಕಕ್ಕೆ 25,000 ರೂ.ಗಳ ಬಹುಮಾನ ನೀಡಲಾಗುವುದು. ಯಕ್ಷಗಾನ ಮತ್ತು ಮೂಡಲಪಾಯ ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಅಭಿನಯ ಇತ್ಯಾದಿ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಯಕ್ಷಗಾನ ಪ್ರಸಂಗ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಕಳುಹಿಸಬಹುದು. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಪುಸ್ತಕ ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜೂ.23ರೊಳಗೆ ಅರ್ಜಿ ಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು. ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಲ್ಯವಿರುತ್ತದೆ. ಹೆಚ್ಚಿನ ವಿವರ ಹಾಗೂ ಅರ್ಜಿ ಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ:080- 22113146) ಪಡೆಯಬಹುದು ಎಂದು ಅಕಾಡೆಮಿಯ ರಿ ಜಿಸ್ಟ್ರಾರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News