×
Ad

ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಭಾಸ್ಕರ್ ರಾವ್ ಕಿದಿಯೂರ್

Update: 2018-06-02 21:19 IST

ಉಡುಪಿ, ಜೂ.2: ಪಕ್ಷದ ಮುಖಂಡರ ಸೂಚನೆಯ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಅವರು ಭಾಸ್ಕರ್ ರಾವ್ ಕಿದಿಯೂರು ಇವರನ್ನು ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಉಡುಪಿ ಬ್ಲಾಕ್ ಕಾಂಗ್ರೆಸ್‌ನ ವಕ್ತಾರರಾಗಿದ್ದ ಭಾಸ್ಕರ ರಾವ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾಗಿ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಸಂಚಾಲಕರಾಗಿ, ಅಂಬಲಪಾಡಿ ಯುವಕ ಮಂಡಲ ದ ಅಧ್ಯಕ್ಷ, ಪೂರ್ಣಪ್ರಜ್ಞ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಸ್ತುತ ಅಂಬಲಪಾಡಿ ಸಮಾಜ ಶಿಕ್ಷಣ ಸಂಸ್ಥೆ ಯ ಉಪಾಧ್ಯಕ್ಷ, ರಂಗಭೂಮಿಯ ಕಾರ್ಯದರ್ಶಿಯಾಗಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News