×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2018-06-02 22:05 IST

ಬೈಂದೂರು, ಜೂ.2: ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.1ರಂದು ರಾತ್ರಿ ವೇಳೆ ಒತ್ತಿನಣೆಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಕಾಪು ಹೊಸಮಾರಿಗುಡಿ ಬಳಿ ನಿವಾಸಿ ಸೂರ್ಯ ಮೇಸ್ತ್ರೀ ಎಂಬವರ ಮಗ ಜಗದೀಶ್(32) ಎಂಬವರು ಮೇ29ರಂದು ಬೆಳಗ್ಗೆ ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ನೋವಿನಿಂದ ಬಳಲುತ್ತಿದ್ದ ಕಾಪು ಗರಡಿ ಬಳಿಯ ಬಂಜಬೈಲು ನಿವಾಸಿ ಕೃಷ್ಣಪ್ಪಪೂಜಾರಿ ಎಂಬವರ ಮಗ ಧನರಾಜ್ (45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 29ರಂದು ರಾತ್ರಿ ವೇಳೆ ಮನೆಯ ಎದುರಿನ ಜಗುಲಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News