ಬೋಳಿಯಾರ್: ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ
ಕೊಣಾಜೆ, ಜೂ. 3: ಮಂಗಳೂರು ವಿಧಾನಸಭಾ ಕೇತ್ರದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಬೋಳಿಯಾರ್‌ನಲ್ಲಿ ರವಿವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕರ್ತರನ್ನು ಅಭಿನಂದಿಸಿದರು. ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 7 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿಯಾಗಿದೆ ಹಿನ್ನೆಡೆಯಾಗಿದೆ. ಆದರೂ ಕಳೆದ ಚುನಾವಣೆಗಿಂತ 21 ಸಾವಿರದಷ್ಟು ಅಧಿಕ ಮತಗಳನ್ನು ಪಡೆದಿದೆ. ಇವತ್ತಿನ ಸೋಲು ನಾಲಿನ ಗೆಲುವು ಎಂಬ ಆಶಾಭಾವನೆಯೊಂದಿಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರಲ್ಲಿದೆ ಎಂದು ಅವರು ಹೇಳಿದರು.
ಸಂತೋಷ್ ಕುಮಾರ್ ಬೋಳಿಯಾರ್ ಅವರು ಮಾತನಾಡಿ, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋತರೂ ಕೂಡಾ ಬಿಜೆಪಿಯ ಗೆಲುವುಗಾಗಿ ದೇವದುರ್ಲಭ ಕಾರ್ಯಕರ್ತರು ಹಗಲಿರುಲು ಶ್ರಮಪಟ್ಟು ದುಡಿದ್ದಿದ್ದಾರೆ. ಅವರ ಋಣವನ್ನು ತೀರಿಸಲು ಖಂಡಿತಾ ಸಾಧ್ಯವಿಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 15 ಕ್ಷೇತ್ರಗಳಲ್ಲಿ 14 ಕಡೆ ಬಿಜೆಪಿ ಜಯಗಳಿಸಿದ ಸಂತೋಷದಲ್ಲಿ ನಾನು ಸೋತಿರುವುದು ನನಗೆ ಅರಿವಾಗಲೇ ಇಲ್ಲ. ವಾಜಪೇಯಿಯವರ ಮಾತಿನಂತೆ ನಾವು ಒಮ್ಮೆ ಸೋತರೂ ಹಿಂದಿರುಗಿ ಹೋಗುವ ಪ್ರಶ್ನೆಯೇ ಇಲ್ಲ. ಮತೊಮ್ಮೆ ಈ ಭಾಗದಲ್ಲಿ ಬಿಜೆಪಿಯು ಗೆದ್ದು ಬರುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಮಂಗಳೂರು ಕ್ಷೇತ್ರದ ಚುನಾವಣಾ ಸಂಯೋಜಕ ಹರಿಶ್ಚಂದ್ರ ಮಂಜೇಶ್ವರ, ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ ಉಳ್ಳಾಲ್, ರಾಜ್ಯ ಕಾರ್ಯಕಾರಿನಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ,ಜಿಲ್ಲಾ ಪಂಚಾಯಿತಿ ಸದಸ್ಯರಾದ ಧನಲಕ್ಷ್ಮೀ ಗಟ್ಟಿ, ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಸದಸ್ಯರಾದ ನವೀನ್ ಪಾದಲ್ಪಾಡಿ, ಗಣೇಶ್ ಸುವರ್ಣ ಉಪಸ್ಥಿತರಿದ್ದರು. ಬಿಜೆಪಿ ಮುಖಂಡ ಟಿ.ಜಿ.ರಾಜಾರಾಮ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಆಚಾರ್ಯ ಸ್ವಾಗತಿಸಿದರು. ಯಶವಂತ ಅಮೀನ್ ವಂದಿಸಿದರು. ಹರಿಯಪ್ಪ ಸಾಲಿ ಯಾನ್, ಮೋಹನ್‌ದಾಸ್ ಶೆಟ್ಟಿ, ಪ್ರಕಾಶ್ ಸಿಂಪೋಣಿ ಅವರು ಕಾರ್ಯಕ್ರಮ ನಿರೂಪಿಸಿದರು.