×
Ad

ಕಾಂಗ್ರೆಸ್ ಅವನತಿಯ ಹಾದಿ ಹಿಡಿದಿದೆ: ಸಂಸದ ಪ್ರಹ್ಲಾದ್ ಜೋಶಿ

Update: 2018-06-03 18:36 IST

ಧಾರವಾಡ, ಜೂ, 3: ಪ್ರಧಾನಿ ನರೇಂದ್ರ ಮೋದಿ ಎದುರಿಸಲು ಐವತ್ತು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಆ ಮೂಲಕ ಕಾಂಗ್ರೆಸ್ ಅವನತಿಯ ಹಾದಿ ಹಿಡಿದಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕುಮಾರಸ್ವಾಮಿ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತಾರೆಂದು ಭವಿಷ್ಯ ನಾನು ಹೇಳಲಾರೆ. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರ ಶೀಘ್ರದಲ್ಲೆ ಪತನಗೊಳ್ಳಲಿದೆ ಎಂದು ನುಡಿದರು.

ಸಿದ್ದರಾಮಯ್ಯನವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ. ಹೀಗಾಗಿ ಎಲ್ಲ ಪ್ರಮುಖ ಖಾತೆಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ ಎಂದು ಲೇವಡಿ ಮಾಡಿದ ಅವರು, ಮೈತ್ರಿ ಸರಕಾರದಲ್ಲಿ ಸಂಪುಟ ರಚನೆಗೆ ಮೊದಲೇ ಆಂತರೀಕ ಭಿನ್ನಮತ ಆರಂಭವಾಗಿದೆ ಎಂದರು.

ತಕ್ಕ ಪಾಠ: ಧರ್ಮ ರಾಜಕಾರಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದ ವಿನಯ್ ಕುಲಕರ್ಣಿ ಸೇರಿದಂತೆ ಬಹುತೇಕ ಸಚಿವರು ಮನೆ ಸೇರಿದ್ದಾರೆ. ಇದಕ್ಕೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಹೊರತಾಗಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News