×
Ad

ಶಿವಮೊಗ್ಗ: ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು

Update: 2018-06-03 19:43 IST
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಜೂ. 3: ಕೆರೆಯಲ್ಲಿ ಈಜಾಡಲು ತೆರಳಿದ ಬಾಲಕರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ವರದಿಯಾಗಿದೆ.

ತಮ್ಮಡಿಹಳ್ಳಿ ಗ್ರಾಮದ ನಿವಾಸಿಗಳಾದ ಚಿರಂತ್ (14), ವಸಂತ್ (14) ಹಾಗೂ ಅಜೇಯ (12) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕಾಗಮಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಬಾಲಕರು ನೀರುಪಾಲಾಗಿದ್ದು, ಬಾಲಕರ ಶವಗಳನ್ನು ಗ್ರಾಮಸ್ಥರು ನೀರಿನಿಂದ ಹೊರ ತೆಗೆದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಘಟನೆ ಹಿನ್ನೆಲೆ: ಭಾನುವಾರವಾದ ಕಾರಣದಿಂದ ಗ್ರಾಮದ ಏಳೆಂಟು ಬಾಲಕರು ಗ್ರಾಮದ ಹೊರವಲಯದ ಜಂಗ್ಲಿ ಕೆರೆಯಲ್ಲಿ ಈಜಾಡಲು ತೆರಳಿದ್ದರು. ಬೇಸಿಗೆಯಲ್ಲಿ ಬಿದ್ದ ಮಳೆಯಿಂದ ಕೆರೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿತ್ತು. ಕೆರೆಯ ಕೆಲವೆಡೆ ಆಳವಿದ್ದು, ಇದರ ಅರಿವಿರದ ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News