ಬೆಂಗಳೂರು: ಬೈಕ್ ಸವಾರನ ಮೇಲೆ ಪೊಲೀಸ್ ಪೇದೆಯ ದರ್ಪ; ಆರೋಪ
Update: 2018-06-03 20:50 IST
ಬೆಂಗಳೂರು, ಜೂ.3: ಟ್ರಾಫಿಕ್ ಪೊಲೀಸ್ ಪೇದೆಯೊಬ್ಬ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು ಎನ್ನಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ .
ನಗರದ ಶಿವಾನಂದ ಸರ್ಕಲ್ ಬಳಿ ಬೈಕ್ ಸವಾರ ರಮೇಶ್ ಎಂಬವರು ಯೂ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಅಲ್ಲೇ ಇದ್ದ ಪೊಲೀಸರು ಬೈಕ್ ತಡೆದಿದ್ದಾರೆ. ನಾನೇನೂ ತಪ್ಪು ಮಾಡಿಲ್ಲ, ಯಾಕೆ ತಡೆದಿರಿ ಎಂದು ರಮೇಶ್ ಪೋಲೀಸರನ್ನು ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಲ್ಲಿ ಪೊಲೀಸರು ನಿಂದಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.