ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತನಿಖೆ ಕಾರ್ಯ ಶ್ಲಾಘನೀಯ: ಎಸ್ ಡಿ ಪಿ ಐ

Update: 2018-06-03 17:37 GMT

ಮಂಗಳೂರು, ಜೂ. 3: ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ ಸಂಶಯಾಸ್ಪದ ಸಾವಿನ ಪ್ರಕರಣವು ಸಂಶಯಾಸ್ಪದ ಸಾವಲ್ಲ ಕೊಲೆ ಎಂಬುದರ ಬಗ್ಗೆ ಹಲವು ಸಂಶಯಗಳ ಮೇರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಬಜರಂಗದಳದ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಸಾವಾಗಿದ್ದಾರೆ ಎಂಬುದು ಬೆಳಕಿಗೆ ಬಂದು ಮೂರು ಮಂದಿ ಸಂಘಪರಿವಾರದ ಗೂಂಡಾಗಳನ್ನು ಬಂಧಿಸಿ ನಂತರ ತೀವ್ರ ತನಿಖೆಗೆ ಒಳಪಡಿಸಿದಾಗ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದ್ದು ಹುಸೈನಬ್ಬ ಪೊಲೀಸ್ ಜೀಪಿನಲ್ಲಿ ಮೃತಪಟ್ಟಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರು ಅಸಹಜ ಸಾವು ಎಂಬ ನಾಟಕವನ್ನು ಮಾಡಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ.
ಈ ಸಂಬಂಧ ಹಿರಿಯಡ್ಕ ಎಸ್ಸೈ ಹಾಗೂ ಇಬ್ಬರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿ ಹಲವು ಸಂಶಯಗಳಿದ್ದ ಪ್ರಕರಣದ ನೈಜತೆಯನ್ನು ಜನರ ಮುಂದೆ ನಿಷ್ಪಕ್ಷಪಾತ ತನಿಖೆ ನಡೆಸಿ ಬಹಿರಂಗಪಡಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರ ಕಾರ್ಯ ಶ್ಲಾಘನೀಯ ಎಂದು ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಪ್ರ. ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News