‘ಸಿಇಟಿ-2018’ ದಾಖಲಾತಿ ಪರಿಶೀಲನೆ ವೇಳಾಪಟ್ಟಿ

Update: 2018-06-04 13:55 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.4: ಸಿಇಟಿ-2018ರ ದಾಖಲಾತಿ ಪರಿಶೀಲನೆಯ ವೇಳಾಪಟ್ಟಿಯನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್  http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಜೂ.5ರಂದು ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆಯನ್ನು ಮತ್ತು ಕ್ರೀಡಾ ಅಭ್ಯರ್ಥಿಗಳಿಗೆ(1-4 preference only ) ಪ್ರಮಾಣ ಪತ್ರಗಳನ್ನು ಹಾಗೂ ಎನ್‌ಸಿಸಿ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳ ಪರಿಶೀಲನೆಯನ್ನು ಜೂ.6ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು.

ಸಾಮಾನ್ಯ ವರ್ಗ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ ಜೂ.7ರಿಂದ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಸಮೀಪದ ಸಹಾಯ ಕೇಂದ್ರಗಳಲ್ಲಿ ಎಲ್ಲ ಅಗತ್ಯವಿರುವ ಮೂಲ ದಾಖಲೆಗಳೊಂದಿಗೆ ನಿಗದಿಪಡಿಸಿರುವ ದಿನದಂದು ಹಾಜರಾಗಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News