ಬಸ್ ಪಲ್ಟಿ : 8 ಮಂದಿಗೆ ಗಾಯ

Update: 2018-06-04 14:26 GMT

ಹರಿಹರ,ಜೂ.4: ಹೊನ್ನಾಳಿಯಿಂದ-ಹರಿಹರಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಾಲೂಕಿನ ಮೂಗಿನಗೊಂದಿ ಗ್ರಾಮದ ಬಳಿ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 8 ಮಂದಿ ಗಾಯಗೊಂಡು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಸೋಮವಾರ ಬೆಳಗ್ಗೆ ನಡೆಸಿದೆ.

ಚಾಲಕ ಮತ್ತು ನಿರ್ವಾಹಕರಿಬ್ಬರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಗಾಯಗೊಂಡವರನ್ನು ಮಲೆಬೆನ್ನೂರು ಮತ್ತು ಹರಿಹರ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವ ಮಲೇಬೆನ್ನೂರು ಪಿ.ಎಸ್.ಐ ಸುನೀಲ್‍ ಕುಮಾರ್ ತಿಳಿಸಿದ್ದಾರೆ.

ಹರಿಹರದಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಾಳುಗಳು ಹರಿಹರದ ನಿವಾಸಿಗಳು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News