×
Ad

ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನೇ ಕಾರಣ: ಅನುರಾಧ

Update: 2018-06-04 20:29 IST

ಉಡುಪಿ, ಜೂ.4:ಪ್ರಕೃತಿಯಲ್ಲಿ ಸಂಭವಿಸುತ್ತಿರುವ ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನು ಸತತವಾಗಿ ಪರಿಸರವನ್ನು ನಾಶ ಮಾಡುತ್ತಿರುವುದು ಹಾಗೂ ಕಲುಷಿತಗೊಳಿಸುತ್ತಿರುವುದೇ ಪ್ರಮುಖ ಕಾರಣ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದ್ದಾರೆ.

ಸೋಮವಾರ ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ, ಉಡುಪಿ ನಗರಸಭೆ, ಜಿಲ್ಲಾ ಪರಿಸರ ಇಲಾಖೆ, ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಬೀಚ್ ಅಭಿವೃದ್ದಿ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಚಾರಣೆ ಅಂಗವಾಗಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಾನವ ಪರಿಸರವನ್ನು ಹಾಳು ಮಾಡುತ್ತಿರುವ ಕಾರಣ ಪ್ರಾಕೃತಿಕ ವಿಕೋಪ ಗಳು ಕಂಡುಬರುತ್ತಿದ್ದು, ಜಾಗತಿಕ ವಾತಾವರಣ ಬಿಸಿಯಾಗುತ್ತಿದೆ. ಇದಕ್ಕೆ ಓರೆನ್ ಪದರ ನಾಶವಾಗುತ್ತಿರುವುದೇ ಕಾರಣ. ಪರಿಸರವನ್ನು ಸ್ವಚ್ಛವಾಗಿ ಟ್ಟುಕೊಂಡು, ಹಸಿರು ಬೆಳೆಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕಿದೆ. ಸಮುದ್ರದಲ್ಲಿ ತ್ಯಾಜ್ಯ ಬಿಸಾಡುವುದರಿಂದ ಅದನ್ನು ಸೇವಿಸುವ ಜಲರಾಶಿಗಳು ನಾಶವಾಗುತ್ತಿದ್ದು, ಜೈವಿಕ ಅಸಮತೋಲನ ಉಂಟಾಗುತ್ತಿದೆ. ಆದ್ದರಿಂದ ಪರಿಸರವನ್ನು ಸಂರಕ್ಷಿಸುವ ಜೊತೆಗೆ ಸ್ವಚ್ಚತೆ ಕಾಪಾಡುವ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಅನುರಾಧ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆ ಆಯುಕ್ತ ಜನಾರ್ದನ್, ಉಡುಪಿ ನಗರಸಭಾ ವ್ಯಾಪ್ತಿಯ ಶಾಲೆಗಳಲ್ಲಿ ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲು ನಿರ್ಧರಿಸಿದ್ದು, ಆಯ್ದ ವಿದ್ಯಾರ್ಥಿಗಳನ್ನು ನಗರಸಭೆಯ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಕರೆದೊಯ್ದು, ಪ್ಲಾಸ್ಟಿಕ್ ವಿಲೇವಾರಿ ಸಮಸ್ಯೆ ಕುರಿತು ವೀಕ್ಷಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸೆಆಯುಕ್ತಜನಾರ್ದನ್,ಉಡುಪಿನಗರಸಾ ವ್ಯಾಪ್ತಿಯ ಶಾಲೆಗಳಲ್ಲಿ ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲು ನಿರ್ರಿಸಿದ್ದು,ಆಯ್ದವಿದ್ಯಾರ್ಥಿಗಳನ್ನುನಗರಸೆಯ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಕರೆದೊಯ್ದು, ಪ್ಲಾಸ್ಟಿಕ್ ವಿಲೇವಾರಿ ಸಮಸ್ಯೆ ಕುರಿತು ವೀಕ್ಷಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಮಲ್ಪೆಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಮಲ್ಪೆ ಬೀಚ್ ಅಭಿವೃಧ್ದಿ ಸಮಿತಿಯ ಸುದೇಶ್ ಶೆಟ್ಟಿ, ಮಂಗಳೂರು ಮೀನುಗಾರಿಕಾ ಕಾಲೇಜಿನ ಡೀನ್ ಶಿವಪ್ರಕಾಶ್, ಲಯನ್ಸ್ ಕ್ಲಬ್‌ನ ಜಯಶ್ರೀ ಕೃಷ್ಣರಾಜ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮೀಕಾಂತ್ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀಪತಿ ವಂದಿಸಿದರು.

ಪ್ಲಾಸ್ಟಿಕ್ ತ್ಯಾಜ್ಯದಿಂದ ಜಲರಾಶಿಗಳುಗಳು ನಾಶವಾಗುವ ಕುರಿತು ರಚಿಸಿದ್ದ ಕಲಾಕೃತಿ ಸಮುದ್ರದಲ್ಲಿ ತ್ಯಾಜ್ಯ ಎಸೆಯುವ ಕುರಿತು ಜಾಗೃತಿ ಮೂಡಿಸಿತು. ವಿವಿಧ ಶಾಲಾ ಮಕ್ಕಳಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮವೂ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News