ಮಂಗಳೂರು: ಕಂಪ್ಯೂಟರ್ ಶಿಕ್ಷಕರು, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Update: 2018-06-04 22:01 IST
ಮಂಗಳೂರು, ಜೂ. 4 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಂಗ್ಲ ಮಾಧ್ಯಮದಲ್ಲಿರುವ ಸರಕಾರಿ ಮುಸ್ಲಿಂ ವಸತಿ ಶಾಲೆ ನಾಟೆಕಲ್ ಇಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕರು ಮತ್ತು ನರ್ಸ್ ಹುದ್ದೆಗೆ ಮತ್ತು ದೇರಳಕಟ್ಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವೆ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜೂ.15ರೊಳಗೆ ಭಾವಚಿತ್ರದೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಗೆ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದ.ಕ. ಮಂಗಳೂರು ಇವರ ಪ್ರಕಟನೆ ತಿಳಿಸಿದೆ.