×
Ad

ದ್ವೇಷ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿಯಲ್ಲ: ಯು.ಟಿ.ಖಾದರ್

Update: 2018-06-04 22:25 IST

ಕೊಣಾಜೆ, ಜೂ. 4: ದ್ವೇಷ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿಯಲ್ಲ. ಅದು ಬಿಜೆಪಿಯ ಸಂಸ್ಕೃತಿ. ನಮ್ಮದು ಏನಿದ್ದರೂ ಪ್ರೀತಿಯ ರಾಜಕಾರಣ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದರೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸುವುದರಲ್ಲಿ ಕಾರ್ಯಕರ್ತರ ಪರಿಶ್ರಮವೇ ಕಾರಣ. ಮುಂದಿನ ಲೋಕಸಭೆ ಚುನಾವಣೆಗೆ ನಾವೆಲ್ಲರೂ ಸಿದ್ದರಾಗಬೇಕಿದೆ ಎಂದು ಶಾಸಕ ಯು.ಟಿ.ಖಾದರ್ ಅವರು ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆಯ ಖಾಸಗಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ಹಾಗೂ ಇಪ್ತಾರ್‌ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ಮಂಗಳೂರು ಕ್ಷೇತ್ರದ ಜನತೆ ಅತ್ಯಂತ ಪ್ರೀತಿ ವಿಶ್ವಾಸ ನಂಬಿಕೆಯೊಂದಿಗೆ ಮತ್ತೆ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸದಂತೆ ಕ್ಷೇತ್ರದ ಅಭಿವೃದ್ದಿಗಾಗಿ ಪ್ರಯತ್ನ ಪಡುತ್ತೇನೆ. ಈ ಬಾರಿ ಕ್ಷೇತ್ರದಲ್ಲಿ ಮತಗಳ ಅಂತರ ಕಡಿಮೆಯಾಗಿದೆ ಎಂದು ಯಾರೂ ಬೇಸರಪಡುವ ಅಗತ್ಯವಿಲ್ಲ, ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಹೆಚ್ಚುವರಿ ಮತಪಡೆಯುವಲ್ಲಿ ನಾವು ತೊಡಗಿಸಿಕೊಳ್ಳೋಣ ಎಂದರು.

ಕಾಂಗ್ರೆಸ್ ಮುಖಂಡ ಮುಸ್ತಫಾ ಹರೇಕಳ ಅವರು ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಜಾತಿ ಮತ ಬೇದ ನೋಡದೆ ಪ್ರತಿಯೊಬ್ಬರ ಸಮಸ್ಯೆಯಲ್ಲಿ ಆಲಿಸಿ ಕ್ಷೇತ್ರದ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡಿರುವ ಖಾದರ್ ಅವರು 50 ಸಾವಿರ ಮತಗಳ ಅಂತರದಿಂದ ಗೆಲ್ಲಬೇಕಿತ್ತು, ಮುಂದಿನ ಚುನಾವಣೆಗೆ ನಾವು ಆತ್ಮ ವಿಮರ್ಶೆಯೊಂದಿಗೆ ಮುನ್ನಡೆಯಬೇಕಾದ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಚುನಾವಣಾ ಉಸ್ತುವಾರು ರಾಜಶೇಖರ ಕೋಟ್ಯಾನ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಮೋನು, ಈಶ್ವರ ಉಳ್ಳಾಲ್, ಪದ್ಮನಾಭ ನರಿಂಗಾನ, ವಿಜಯಕೃಷ್ಣಪ್ಪ, ಸದಾಶಿವ ಉಳ್ಳಾಲ, ಸುರೇಶ್ ಭಟ್ನಗರ, ಉಮ್ಮರ್ ಪಜೀರ್, ಎನ್.ಎಸ್,ಕರೀಂ, ಬಾಝಿಲ್ ಡಿಸೋಜ, ಸುರೇಖಾ ಚಂದ್ರಹಾಸ್, ದಿನೇಶ್ ರೈ ಮೊದಲಾದವರು ಉಪಸ್ಥಿತರಿದ್ದರು.

ಅಬ್ದುಲ್ ರಹಿಮಾನ್ ಕೋಡಿಜಾಲ್ ಸ್ವಾಗತಿಸಿದರು. ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News